Jio ಈ ಪ್ಲಾನ್‌ನಲ್ಲಿ ಸಿಗುತ್ತೆ 90 ದಿನಗಳ ವ್ಯಾಲಿಡಿಟಿ 20GB Data ಉಚಿತ
ಜಿಯೋ ಟೆಲಿಕಾಂನ 899 ರೂ.ಗಳ ಪ್ಲಾನ್‌ನಲ್ಲಿ ಹೆಚ್ಚುವರಿಯಾಗಿ 20GB Data ಸಿಗಲಿದೆ
ಜಿಯೋ ಟೆಲಿಕಾಂನ ಈ ಪ್ಲಾನಿನಲ್ಲಿ ಪ್ರತಿದಿನ 2GB Data ಪ್ರಯೋಜನ
ಜಿಯೋದ ಈ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಗಳು ಮತ್ತು SMS ಲಭ್ಯ
Jio ಸಂಸ್ಥೆಯು ದೇಶದ ಮುಂಚೂಣಿಯ ಟೆಲಿಕಾಂ ಸಂಸ್ಥೆಯಾಗಿ ಬಿಂಬಿತವಾಗಿದೆ. ಜಿಯೋ ಕಂಪನಿಯು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಜಿಯೋ ಟೆಲಿಕಾಂನ ಬಹುತೇಕ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳು ಅಧಿಕ ದೈನಂದಿನ ಡೇಟಾ ಪ್ರಯೋಜನ ಪಡೆದುಕೊಂಡಿವೆ. ಅಲ್ಲದೇ ಈ ಪ್ಲಾನ್‌ಗಳು ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದುಕೊಂಡಿವೆ. ಅದಾಗ್ಯೂ, ಜಿಯೋ ಟೆಲಿಕಾಂನ ಕೆಲವೊಂದು ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಡೇಟಾ ಸೌಲಭ್ಯದ ಜೊತೆಗೆ ಜನಪ್ರಿಯ OTT ತಾಣಗಳ ಸದಸ್ಯತ್ವದ ಪ್ರಯೋಜನ ಸಹ ಪಡೆದಿವೆ. ಅಂತಹ ಪ್ರೀಪೇಯ್ಡ್ ಯೋಜನೆಗಳು ಹೆಚ್ಚು ಬೇಡಿಕೆಯಲ್ಲಿ ಇವೆ. ಆ ಪೈಕಿ ಜಿಯೋ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಹೆಚ್ಚುವರಿಯಾಗಿ 20GB ಡೇಟಾ ಒಳಗೊಂಡಿರುವ ಮೂಲಕ ಟ್ರೆಂಡ್‌ನಲ್ಲಿ ಇದೆ. ಹಾಗಾದರೆ ಜಿಯೋ ಟೆಲಿಕಾಂನ 899 ರೂ.ಗಳ ಪ್ಲಾನ್ ಪ್ರಯೋಜನ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 108MP OIS ಕ್ಯಾಮೆರಾ ಇರುವ Redmi Note 15 5G ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ!
Jio 899 ರೂ.ಗಳ ಪ್ಲಾನ್‌ನಲ್ಲಿ 20GB ಡೇಟಾ ಉಚಿತ
ಜಿಯೋ ಟೆಲಿಕಾಂ ಕಂಪನಿಯು ಭಿನ್ನ ಯೋಜನೆಗಳ ಆಯ್ಕೆ ಪರಿಚಯಿಸಿದೆ. ಅವುಗಳಲ್ಲಿ ಜಿಯೋ ಸಂಸ್ಥೆಯ 899 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸದ್ದು ಮಾಡಿದೆ. ಹೌದು, ಜಿಯೋ ಸಂಸ್ಥೆಯ ಈ ಪ್ಲಾನ್ ಹೆಚ್ಚುವರಿಯಾಗಿ 20GB ಡೇಟಾ ಪ್ರಯೋಜನ ಪಡೆದುಕೊಂಡಿದೆ. ಈ ಮೂಲಕ ಅಧಿಕ ಡೇಟಾ ಸೌಲಭ್ಯ ಬಯಸುವ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಯೋಜನೆಯಲ್ಲಿJioTV ಹಾಗೂ JioAICloud ಚಂದಾದಾರಿಕೆ ಪ್ರಯೋಜನ ಗ್ರಾಹಕರಿಗೆ ಲಭ್ಯವಿರುತ್ತದೆ.

ಜಿಯೋ 899 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಗ್ರಾಹಕಸ್ನೇಹಿ ಬೆಲೆಯಲ್ಲಿ ಕಾಣಿಸಿಕೊಂಡಿರುವ ಜಿಯೋ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ವ್ಯಾಲಿಡಿಟಿ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಹೈ ಸ್ಪೀಡ್ ಡೇಟಾ ಪ್ರಯೋಜನ ದೊರೆಯುತ್ತದೆ. ಇನ್ನು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 200 GB ಡೇಟಾ ಪ್ರಯೋಜನ ಲಭ್ಯವಾಗುತ್ತದೆ ಜೊತೆಗೆ ಹೆಚ್ಚುವರಿಯಾಗಿ 20GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನದ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಸಿಗುತ್ತದೆ.
ಅದೇ ರೀತಿ ಜಿಯೋ ಟೆಲಿಕಾಂನ 749 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ಹೆಚ್ಚುವರಿಯಾಗಿ 20GB Data ಪ್ರಯೋಜನ ಪಡೆದುಕೊಂಡಿದೆ. ಈ ಪ್ಲಾನಿನಲ್ಲಿ ಗ್ರಾಹಕರಿಗೆ ಒಟ್ಟು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಿಗಲಿದೆ. ಈ ವ್ಯಾಲಿಡಿಟಿ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಹೈ ಸ್ಪೀಡ್ ಡೇಟಾ ಪ್ರಯೋಜನ ದೊರೆಯುತ್ತದೆ ಜೊತೆಗೆ ಹೆಚ್ಚುವರಿಯಾಗಿ 20GB ಡೇಟಾ ಪ್ರಯೋಜನ ಸಿಗಲಿದೆ. ಇನ್ನು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 164 GB ಡೇಟಾ ಪ್ರಯೋಜನ ಲಭ್ಯವಾಗುತ್ತದೆ. ಇದರೊಂದಿಗೆ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನದ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಸಿಗುತ್ತದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile