Jio ಟೆಲಿಕಾಂ ಸಂಸ್ಥೆ ದೇಶೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ವಿ ಟೆಲಿಕಾಂ ಹಾಗೂ ಏರ್‌ಟೆಲ್ ಟೆಲಿಕಾಂ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಜಿಯೋ ಟೆಲಿಕಾಂ ಬಳಕೆದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಭಿನ್ನ ಬೆಲೆಯ ರೀಚಾರ್ಜ್ ಯೋಜನೆಗಳ ಲಿಸ್ಟ್ ಒಳಗೊಂಡಿದೆ. ಜಿಯೋ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ಕಡಿಮೆ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಪ್ಲಾನ್‌ಗಳು ಬೇಡಿಕೆಯಲ್ಲಿ ಇವೆ. ಆ ಪೈಕಿ ಜಿಯೋ ಟೆಲಿಕಾಂನ 899 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಬಜೆಟ್ ಬೆಲೆಯ ಮೂಲಕ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 90 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 899 ರೂ.ಗಳ ಪ್ಲಾನ್ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : Vi ಟೆಲಿಕಾಂನ ಈ ಪ್ಲಾನಿನಲ್ಲಿ 180 ದಿನಗಳ ವ್ಯಾಲಿಡಿಟಿ ಜೊತೆಗೆ Unlimited ಡೇಟಾ! ಬೆಲೆ ಎಷ್ಟು?
ರಿಲಾಯನ್ಸ್ ಜಿಯೋ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಪ್ರತಿದಿನ 2GB + 20GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಸಿಗಲಿದೆ.
ರಿಲಾಯನ್ಸ್ ಜಿಯೋ ಟೆಲಿಕಾಂನ 999 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 98 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ.
ರಿಲಾಯನ್ಸ್ ಜಿಯೋ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಇರಲಿದೆ.
ರಿಲಾಯನ್ಸ್ ಜಿಯೋ ಟೆಲಿಕಾಂನ 749 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಿಗುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಪ್ರತಿದಿನ 2GB + 20GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ.