Jio ಟೆಲಿಕಾಂನ ಈ ಪ್ಲಾನಿನಲ್ಲಿ 90 ದಿನಗಳ ವ್ಯಾಲಿಡಿಟಿ ಜೊತೆಗೆ ಹೆಚ್ಚುವರಿಯಾಗಿ 20GB ಡೇಟಾ ಸೌಲಭ್ಯ
ಜಿಯೋ ಸಂಸ್ಥೆಯ 899 ರೂ.ಗಳ ಪ್ಲಾನ್ ಹೆಚ್ಚು ಆಕರ್ಷಕ ಎನಿಸಿದೆ
ಜಿಯೋ ಟೆಲಿಕಾಂನ ಈ ರೀಚಾರ್ಜ್ ಯೋಜನೆಯಲ್ಲಿ ಆಕರ್ಷಕ ಡೇಟಾ ಸೌಲಭ್ಯ
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲಾನ್‌ನಲ್ಲಿ ಉಚಿತ ವಾಯ್ಸ್ ಕರೆ ಪ್ರಯೋಜನ
Jio ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಟೆಲಿಕಾಂ ಹಾಗೂ ವಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಪ್ಲಾನ್‌ಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಪಟ್ಟಿಯಲ್ಲಿ 899 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ಪ್ರಮುಖವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಯೋಜನೆ ಆಕರ್ಷಕ ಪ್ಲಾನ್ ಎನಿಸಬಹುದು. ಹಾಗಾದರೆ ಜಿಯೋ ಟೆಲಿಕಾಂನ 899 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
SurveyAlso Read : Vi ಟೆಲಿಕಾಂನ ಜಸ್ಟ್ 299 ರೂ.ಗಳ ಪ್ಲಾನ್‌ನಲ್ಲಿ ಏನುಂಟು ಏನಿಲ್ಲ ಇಲ್ಲಿದೆ ಮಾಹಿತಿ
Jio 899 ರೂ.ಗಳ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ (ಇದರೊಂದಿಗೆ ಹೆಚ್ಚುವರಿಯಾಗಿ 20GB) ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು. ಅಲ್ಲದೇ ಜಿಯೋ ಹಾಟ್‌ಸ್ಟಾರ್ ಹಾಗೂ ಜಿಯೋ ಓಟಿಟಿ ಆಪ್ಸ್ ಸೌಲಭ್ಯ ಸಿಗಲಿದೆ.
ಜಿಯೋ ಕಂಪನಿಯ 999 ರೂ.ಗಳ ಪ್ಲಾನ್
ಜಿಯೋ ಟೆಲಿಕಾಂನ 999 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು. ಅಲ್ಲದೇ ಜಿಯೋ ಹಾಟ್‌ಸ್ಟಾರ್ ಹಾಗೂ ಜಿಯೋ ಓಟಿಟಿ ಆಪ್ಸ್ ಸೌಲಭ್ಯ ಸಿಗಲಿದೆ.
ಜಿಯೋ ಕಂಪನಿಯ 1029 ರೂ.ಗಳ ಪ್ಲಾನ್
ಜಿಯೋ ಟೆಲಿಕಾಂನ 1029 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಕೂಡಾ ಲಭ್ಯ. ಹಾಗೆಯೇ ಅಮೆಜಾನ್ ಪ್ರೈಮ್ ಚಂದಾದಾರಿಕೆ ಸೌಲಭ್ಯ ಸಹ ದೊರೆಯುತ್ತದೆ.
ಜಿಯೋ ಸಂಸ್ಥೆಯ 749 ರೂ.ಗಳ ಪ್ಲಾನ್
ಜಿಯೋ ಟೆಲಿಕಾಂನ 749 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರ ಜೊತೆಗೆ ಈ ರೀಚಾರ್ಜ್ ಯೋಜನೆಯು 72 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
