JioHotstar ಓಟಿಟಿ ಜೊತೆಗೆ ಅಧಿಕ ದೈನಂದಿನ ಡೇಟಾ ಅಗತ್ಯ ಇದ್ದರೆ ಈ ಯೋಜನೆ ಬೆಸ್ಟ್‌!

HIGHLIGHTS

ಬಜೆಟ್ ಬೆಲೆಗೆ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ ಉತ್ತಮ

ಜಿಯೋ ಟೆಲಿಕಾಂನ ಈ ರೀಚಾರ್ಜ್‌ ಯೋಜನೆಯಲ್ಲಿ 90 ದಿನಗಳ ವ್ಯಾಲಿಡಿಟಿ

ಜಿಯೋ ಟೆಲಿಕಾಂನ ಈ ಪ್ಲಾನಿನಲ್ಲಿ ಉಚಿತ ವಾಯ್ಸ್‌ ಕರೆ ಹಾಗೂ SMS ಸೌಲಭ್ಯ

ಜನಪ್ರಿಯ ಜಿಯೋ ಸಂಸ್ಥೆಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ತನ್ನದೇ ಚಂದಾದಾರರ ಬಳಗವನ್ನು ಹೊಂದಿದೆ. ಅಲ್ಲದೇ ಸಂಸ್ಥೆಯು ಕೆಲವು ಅಧಿಕ ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಪ್ಲಾನ್‌ಗಳ ಮೂಲಕ ಏರ್‌ಟೆಲ್‌ ಟೆಲಿಕಾಂ ಹಾಗೂ ವಿ ಟೆಲಿಕಾಂ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಜಿಯೋ ಟೆಲಿಕಾಂನ ದೈನಂದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಅಧಿಕ ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ ಬಜೆಟ್‌ ಪ್ರೈಸ್‌ನ ಕೆಲವು ಯೋಜನೆಗಳಲ್ಲಿ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ JioHotstar ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಅವುಗಳಲ್ಲಿ 899 ರೂ.ಗಳ ಪ್ಲಾನ್ ಗಮನ ಸೆಳೆದಿದೆ. ಹಾಗಾದರೆ ಜಿಯೋ ಟೆಲಿಕಾಂನ 899 ರೂ.ಗಳ ಯೋಜನೆಯಲ್ಲಿ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Google Pixel 9a ಮೊಬೈಲ್‌ ಖರೀದಿಸಲು ಇದುವೇ ಬೆಸ್ಟ್‌ ಟೈಮ್‌! ಭರ್ಜರಿ ಆಫರ್‌ ಲಭ್ಯ

ಜಿಯೋ 899 ರೂ.ಗಳ ಪ್ಲಾನ್‌ನಲ್ಲಿ JioHotstar ಸೌಲಭ್ಯ

ಜಿಯೋ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿಗೆ ಹೆಚ್ಚುವರಿಯಾಗಿ 20GB ಡೇಟಾ ಲಭ್ಯವಾಗಲಿದೆ. ಅಲ್ಲದೇ ಈ ಯೋಜನೆಯು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯಲ್ಲಿ JioHotstar ಓಟಿಟಿ ಚಂದಾದಾರಿಕೆಯ ಸೌಲಭ್ಯ ಸಹ ಲಭ್ಯ. ಬಜೆಟ್‌ ಬೆಲೆಯಲ್ಲಿ ಈ ಯೋಜನೆ ಗಮನ ಸೆಳೆದಿದೆ.

Jio rs 799 plan

ಜಿಯೋದ ಇತರೆ ಪ್ರಮುಖ ಯೋಜನೆಗಳು

ಜಿಯೋ ಟೆಲಿಕಾಂನ 749 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿಗೆ ಹೆಚ್ಚುವರಿಯಾಗಿ 20GB ಡೇಟಾ ಲಭ್ಯವಾಗಲಿದೆ. ಅಲ್ಲದೇ ಈ ಯೋಜನೆಯು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುತ್ತದೆ. ಇದರೊಟ್ಟಿಗೆ ಈ ಯೋಜನೆಯಲ್ಲಿ JioHotstar ಓಟಿಟಿ ಚಂದಾದಾರಿಕೆಯ ಸೌಲಭ್ಯ ಸಹ ಲಭ್ಯ.

ಜಿಯೋ ಟೆಲಿಕಾಂನ 719 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಜಿಯೋದ ಈ ಪ್ಲಾನ್‌ ಸಹ ಬಜೆಟ್‌ ದರದಲ್ಲಿ ಆಕರ್ಷಕ ಎನಿಸಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :