ಜಿಯೋ ಟೆಲಿಕಾಂ ಮಾರುಕಟ್ಟೆಯಲ್ಲಿ ವಿ ಹಾಗೂ ಏರ್‌ಟೆಲ್ ಕಂಪನಿಗಳಿಗೆ ಪೈಪೋಟಿ ನೀಡುತ್ತಾ ಸಾಗಿದೆ. Jio ಟೆಲಿಕಾಂ ಈಗಾಗಲೇ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಿ ಗಮನ ಸೆಳೆದಿದೆ. ಸಂಸ್ಥೆಯ ಕೆಲವು ಪ್ಲಾನ್‌ಗಳು ಅಗ್ಗದ ದರದಲ್ಲಿ ಗಮನ ಸೆಳೆದಿದ್ದರೆ ಮತ್ತೆ ಕೆಲವು ಯೋಜನೆಗಳು ಆಕರ್ಷಕ ಪ್ರಯೋಜನಗಳ ಮೂಲಕ ಸದ್ದು ಮಾಡಿವೆ. ಆ ಪೈಕಿ ಜಿಯೋ ಟೆಲಿಕಾಂನ 949 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ದರದ ಯೋಜನೆಯು ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸಹ ಒಳಗೊಂಡಿದೆ. ಇದರೊಂದಿಗೆ ಓಟಿಟಿ ಪ್ರಯೋಜನ ಸಹ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 949 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : ಬಜೆಟ್ ಬೆಲೆಯ Redmi 15C 5G ಮೊಬೈಲ್ ಈಗ ಬೆಸ್ಟ್ ಆಫರ್‌ನಲ್ಲಿ ಲಭ್ಯ!
ಜಿಯೋ ಟೆಲಿಕಾಂನ 949 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 168GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioHotstar, JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.
ಜಿಯೋ ಟೆಲಿಕಾಂನ 749 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿಯೂ ಸಹ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಹಾಗೂ 20GB ಹೆಚ್ಚುವರಿ ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 164GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 72 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.
ಜಿಯೋ ಟೆಲಿಕಾಂನ 859 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿಯೂ ಸಹ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 168GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಇನ್ನು ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.