Jio 999 ರೂ.ಗಳ ಪ್ಲಾನ್‌: ಇದು ಬಜೆಟ್‌ ಬೆಲೆಯಲ್ಲಿ ಬೊಂಬಾಟ್‌ ಯೋಜನೆ

HIGHLIGHTS

ಜಿಯೋ ಟೆಲಿಕಾಂನ ಈ ಪ್ಲಾನ್‌ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಪಡೆದಿದೆ

ಜಿಯೋ 999 ರೂ.ಗಳ ಪ್ಲಾನ್‌ ಪ್ರತಿದಿನ 2GB ಡೇಟಾ ಸೌಲಭ್ಯ ಒದಗಿಸಲಿದೆ

ಜಿಯೋ ಟೆಲಿಕಾಂನ ಈ ಯೋಜನೆಯು ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಹೊಂದಿದೆ

ಜನಪ್ರಿಯ ಜಿಯೋ ಟೆಲಿಕಾಂ ಮಾರುಕಟ್ಟೆಯಲ್ಲಿ ವಿ ಹಾಗೂ ಏರ್‌ಟೆಲ್‌ ಕಂಪನಿಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆ ಕಾಯ್ದುಕೊಂಡು ಸಾಗಿದೆ. Jio ಟೆಲಿಕಾಂ ಈಗಾಗಲೇ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸಂಸ್ಥೆಯ ಕೆಲವು ಪ್ಲಾನ್‌ಗಳು ಅಗ್ಗದ ದರದಲ್ಲಿ ಗಮನ ಸೆಳೆದಿದ್ದರೆ ಮತ್ತೆ ಕೆಲವು ಯೋಜನೆಗಳು ಆಕರ್ಷಕ ಪ್ರಯೋಜನಗಳ ಮೂಲಕ ಸದ್ದು ಮಾಡಿವೆ. ಆ ಪೈಕಿ ಜಿಯೋ ಟೆಲಿಕಾಂನ 999 ರೂ.ಗಳ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ದರದ ಯೋಜನೆಯು ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸಹ ಪಡೆದುಕೊಂಡಿದೆ. ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನ ಸಹ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 999 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Also Read : Realme P4 Lite 5G ಮೊಬೈಲ್‌ ನಾಳೆ ಮತ್ತೆ ಖರೀದಿಗೆ ಲಭ್ಯ! ಆಫರ್‌ ಬೆಲೆ ನೋಡಿ

Jio ಟೆಲಿಕಾಂನ 999 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 999 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 196GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 98 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

ಜಿಯೋದ ಇತರೆ ಆಕರ್ಷಕ ಪ್ಲಾನ್‌ಗಳ ಮಾಹಿತಿ

ಜಿಯೋ ಟೆಲಿಕಾಂನ 899 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿಯೂ ಸಹ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಹಾಗೂ 20GB ಹೆಚ್ಚುವರಿ ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 200 GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

ಜಿಯೋ ಟೆಲಿಕಾಂನ 859 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿಯೂ ಸಹ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 168GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಇನ್ನು ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :