Jio ಟೆಲಿಕಾಂನ ಈ ಪ್ಲಾನ್‌ನಲ್ಲಿ ಪ್ರತಿದಿನ 2.5GB ಡೇಟಾ ಜೊತೆಗೆ 365 ದಿನಗಳ ವ್ಯಾಲಿಡಿಟಿ!

HIGHLIGHTS

ಜಿಯೋದ ಈ ಪ್ಲಾನ್‌ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಬೆಸ್ಟ್‌

ಜಿಯೋ 3599 ರೂ.ಗಳ ಯೋಜನೆಯಲ್ಲಿ 365 ದಿನಗಳ ವ್ಯಾಲಿಡಿಟಿ ಪ್ರಯೋಜನ

ಜಿಯೋ ಟೆಲಿಕಾಂನ ಈ ಪ್ಲಾನ್‌ನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಲಭ್ಯ

Jio ಟೆಲಿಕಾಂನ ಈ ಪ್ಲಾನ್‌ನಲ್ಲಿ ಪ್ರತಿದಿನ 2.5GB ಡೇಟಾ ಜೊತೆಗೆ 365 ದಿನಗಳ ವ್ಯಾಲಿಡಿಟಿ!

Jio ಟೆಲಿಕಾಂ ಕಂಪನಿಯು ಈಗಾಗಲೇ ಮಾರುಕಟ್ಟೆಯಲ್ಲಿ ಜನಪ್ರಿಯತೆ ಪಡೆದುಕೊಂಡಿದೆ. ಅಲ್ಲದೇ ಜಿಯೋ ಸಂಸ್ಥೆಯು ವಿ ಹಾಗೂ ಏರ್‌ಟೆಲ್‌ ಕಂಪನಿಗಳಿಗೆ ನೇರ ಟಾಂಗ್‌ ನೀಡುತ್ತಾ ಸಾಗಿದೆ. ಜಿಯೋ ಸಂಸ್ಥೆಯ ಕೆಲವು ಯೋಜನೆಗಳು ಅಧಿಕ ದೈನಂದಿನ ಡೇಟಾ ಮೂಲಕ ಗಮನ ಸೆಳೆದಿವೆ. ಹಾಗೆಯೇ ಜಿಯೋದ ವಾರ್ಷಿಕ ವ್ಯಾಲಿಡಿಟಿಯ ರೀಚಾರ್ಜ್‌ ಪ್ಲಾನ್‌ಗಳು ಆಕರ್ಷಕ ಪ್ರಯೋಜನಗಳ ಮೂಲಕ ಸದ್ದು ಮಾಡಿವೆ. ಆ ಪೈಕಿ ಜಿಯೋ ಟೆಲಿಕಾಂನ 3599 ರೂ.ಗಳ ಬೆಲೆಯ ವ್ಯಾಲ್ಯೂ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ದರದ ಯೋಜನೆಯು ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸಹ ಒಳಗೊಂಡಿದೆ. ಇದರೊಂದಿಗೆ ಓಟಿಟಿ ಪ್ರಯೋಜನ ಸಹ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 3599 ರೂ.ಗಳ ಪ್ಲಾನ್‌ ಹಾಗೂ ಇತರೆ ವ್ಯಾಲ್ಯೂ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Samsung Galaxy M56 5G ಮೊಬೈಲ್‌ಗೆ ಭರ್ಜರಿ ಆಫರ್‌! ಭಾರೀ ಬೆಲೆ ಇಳಿಕೆ

Jio ಟೆಲಿಕಾಂನ 3599 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 3,599 ರೂ.ಗಳ ವ್ಯಾಲ್ಯೂ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನ ಸಿಗಲಿದ್ದು, ಒಟ್ಟಾರೇ ವಾರ್ಷಿಕ ವ್ಯಾಲಿಡಿಟಿ ಅವಧಿಗೆ ಒಟ್ಟು 912.5GB ಡೇಟಾ ದೊರೆಯುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ಯೋಜನೆಯ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

jio

ಜಿಯೋದ ಇತರೆ ಆಕರ್ಷಕ ಪ್ಲಾನ್‌ಗಳ ಮಾಹಿತಿ

ಜಿಯೋ ಕಂಪನಿಯ 3,999 ರೂ.ಗಳ ವಾರ್ಷಿಕ ವ್ಯಾಲಿಡಿಟಿ ಪ್ರೀಪೇಯ್ಡ್‌ ರೀಚಾರ್ಜ್‌ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನ ಸಿಗಲಿದ್ದು, ಒಟ್ಟಾರೇ ವಾರ್ಷಿಕ ವ್ಯಾಲಿಡಿಟಿ ಅವಧಿಗೆ ಒಟ್ಟು 912.5GB ಡೇಟಾ ದೊರೆಯುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ಯೋಜನೆಯ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ FanCode, JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

ಜಿಯೋ ಟೆಲಿಕಾಂನ 2025 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ನಲ್ಲಿ ಬಳಕೆದಾರರಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 500GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 200 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಇನ್ನು ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಯೋಜನೆಯಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo