Reliance Jio ಸಂಸ್ಥೆಯ 369 ರೂ.ಗಳ ಪ್ಲಾನಿನಲ್ಲಿ 84 ದಿನಗಳ ವ್ಯಾಲಿಡಿಟಿ ಪಕ್ಕಾ! ಡೇಟಾ ಸಹ ಲಭ್ಯ

HIGHLIGHTS

ಜಿಯೋದ ಈ ಯೋಜನೆಯು ಫೀಚರ್‌ ಫೋನ್‌ ಬಳಕೆದಾರರಿಗೆ ಸೂಕ್ತ

ಜಿಯೋ ಟೆಲಿಕಾಂನ 369 ರೂ.ಗಳ ಪ್ಲಾನ್‌ನಲ್ಲಿ 84 ದಿನಗಳ ವ್ಯಾಲಿಡಿಟಿ

ಜಿಯೋದ 369 ರೂ.ಗಳ ಯೋಜನೆಯಲ್ಲಿ 300 SMS ದೊರೆಯುತ್ತವೆ

Reliance Jio ಸಂಸ್ಥೆಯ 369 ರೂ.ಗಳ ಪ್ಲಾನಿನಲ್ಲಿ 84 ದಿನಗಳ ವ್ಯಾಲಿಡಿಟಿ ಪಕ್ಕಾ! ಡೇಟಾ ಸಹ ಲಭ್ಯ

ಜನಪ್ರಿಯ Reliance Jio ಸಂಸ್ಥೆಯು ಭಿನ್ನ ಪ್ರೀಪೇಯ್ಡ್‌ ಯೋಜನೆಗಳ ಲಿಸ್ಟ್‌ ಹೊಂದಿದೆ. ಅದೇ ರೀತಿ ಜಿಯೋ ಫೀಚರ್‌ ಫೋನ್‌ ಬಳಕೆದಾರರಿಗಾಗಿ ಕೆಲವು ಆಕರ್ಷಕ ಯೋಜನೆಗಳ ಆಯ್ಕೆ ಸಹ ನೀಡಿದೆ. ಆ ಪೈಕಿ ಜಿಯೋ ಟೆಲಿಕಾಂನ 369 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಬಜೆಟ್‌ ದರದಲ್ಲಿ ಆಕರ್ಷಕ ಪ್ಲಾನ್‌ ಆಗಿ ಕಾಣಿಸಿಕೊಂಡಿದೆ. ಈ ಯೋಜನೆಯು ವಾಯ್ಸ್‌ ಕರೆ, ಡೇಟಾ ಸೌಲಭ್ಯ, ಎಸ್‌ಎಮ್‌ಎಸ್‌ ಒಳಗೊಂಡಂತೆ ಇದರೊಂದಿಗೆ ಓಟಿಟಿ ಚಂದಾದಾರಿಕೆಯ ಪ್ರಯೋಜನ ಸಹ ಒಳಗೊಂಡಿದೆ. ಮುಖ್ಯವಾಗಿ ಅಧಿಕ ವ್ಯಾಲಿಡಿಟಿ ಜೊತೆಗೆ ನಿಗದಿತ ಡೇಟಾ ಸೌಲಭ್ಯ ಬಯಸುವ ಗ್ರಾಹಕರಿಗೆ ಈ ಯೋಜನೆಯ ಸೂಕ್ತವಾಗಿ ಕಾಣಿಸುತ್ತದೆ. ಅಂದಹಾಗೆ ಈ ಪ್ರೀಪೇಯ್ಡ್‌ ಯೋಜನೆಯು ಒಟ್ಟು 42GB ಡೇಟಾ ಪ್ರಯೋಜನದ ಜೊತೆಗೆ 84 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 369 ರೂ.ಗಳ ರೀಚಾರ್ಜ್‌ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಟ್ರಿಪಲ್‌ ಕ್ಯಾಮೆರಾ ಇರುವ Google Pixel 10 ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ!

Reliance Jio ಸಂಸ್ಥೆಯ 369 ರೂ.ಗಳ ಪ್ಲಾನ್‌ ಮಾಹಿತಿ

ಜಿಯೋ ಟೆಲಿಕಾಂನ 369 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 0.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರಿಗೆ 300 ಎಸ್‌ಎಮ್‌ಎಸ್‌ (28 ದಿನಗಳು) ಪ್ರಯೋಜನ ಲಭ್ಯ. ಹಾಗೆಯೇ JioTV ಹಾಗೂ JioSaavn ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.

Reliance Jio

ಇತರೆ ಫೀಚರ್‌ ಫೋನ್‌ ಯೋಜನೆಗಳ ಮಾಹಿತಿ

ಜಿಯೋ ಟೆಲಿಕಾಂನ 234 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 0.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 28GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರಿಗೆ 300 ಎಸ್‌ಎಮ್‌ಎಸ್‌ (28 ದಿನಗಳು) ಪ್ರಯೋಜನ ಸಿಗುತ್ತದೆ. ಹಾಗೆಯೇ JioTV ಹಾಗೂ JioSaavn ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.

ಜಿಯೋ ಟೆಲಿಕಾಂನ 123 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 0.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 14GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಪ್ರಿಪೇಯ್ಡ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರಿಗೆ 300 ಎಸ್‌ಎಮ್‌ಎಸ್‌ (28 ದಿನಗಳು) ಪ್ರಯೋಜನ ದೊರೆಯುತ್ತದೆ. ಹಾಗೆಯೇ JioTV ಹಾಗೂ JioSaavn ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile