Jio ಸಂಸ್ಥೆಯ ಈ ಅಗ್ಗದ ಪ್ಲಾನ್‌ನಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಖಚಿತ!

HIGHLIGHTS

ಜಿಯೋದ ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಸೌಲಭ್ಯ ಒಳಗೊಂಡಿದೆ

ಜಿಯೋ 449 ರೂ.ಗಳ ಯೋಜನೆಯಲ್ಲಿ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಖಚಿತ

ಜಿಯೋ ಟೆಲಿಕಾಂನ ಈ ಪ್ಲಾನ್‌ನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸಿಗುತ್ತದೆ

Jio ಸಂಸ್ಥೆಯ ಈ ಅಗ್ಗದ ಪ್ಲಾನ್‌ನಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಖಚಿತ!

ಭಿನ್ನ ದರದ ಪ್ಲಾನ್‌ಗಳ ಮೂಲಕ Jio ಟೆಲಿಕಾಂ ಮಾರುಕಟ್ಟೆಯಲ್ಲಿ ಈಗಾಗಲೇ ಜನಪ್ರಿಯತೆ ಪಡೆದುಕೊಂಡಿದೆ. ಅಲ್ಲದೇ ಜಿಯೋ ಸಂಸ್ಥೆಯು ವಿ ಹಾಗೂ ಏರ್‌ಟೆಲ್‌ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಸಾಗಿದೆ. ಸಂಸ್ಥೆಯ ಕೆಲವು ಪ್ಲಾನ್‌ಗಳು ಅಧಿಕ ದೈನಂದಿನ ಡೇಟಾ ಮೂಲಕ ಗಮನ ಸೆಳೆದಿದ್ದರೆ ಮತ್ತೆ ಕೆಲವು ಯೋಜನೆಗಳು ಆಕರ್ಷಕ ವ್ಯಾಲಿಡಿಟಿ ಮೂಲಕ ಸದ್ದು ಮಾಡಿವೆ. ಆ ಪೈಕಿ ಜಿಯೋ ಟೆಲಿಕಾಂನ 449 ರೂ.ಗಳ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ದರದ ಯೋಜನೆಯು ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸಹ ಒಳಗೊಂಡಿದೆ. ಇದರೊಂದಿಗೆ ಓಟಿಟಿ ಪ್ರಯೋಜನ ಸಹ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 449 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 20MP ಸೆಲ್ಫಿ ಕ್ಯಾಮೆರಾ ಇರುವ Poco M8 5G ಮೊಬೈಲ್‌ ದರದಲ್ಲಿ ಈಗ ಭರ್ಜರಿ ಇಳಿಕೆ!

Jio ಟೆಲಿಕಾಂನ 449 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 449 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 84GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioHotstar, JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

Jio Plan

ಜಿಯೋದ ಇತರೆ ಆಕರ್ಷಕ ಪ್ಲಾನ್‌ಗಳ ಮಾಹಿತಿ

ಜಿಯೋ ಕಂಪನಿಯ 749 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿಯೂ ಸಹ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಹಾಗೂ 20GB ಹೆಚ್ಚುವರಿ ಡೇಟಾ ಪ್ರಯೋಜನ ಲಭ್ಯ. ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 164GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 72 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

ಜಿಯೋ ಟೆಲಿಕಾಂನ 859 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ನಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 168GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಇನ್ನು ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಯೋಜನೆಯಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo