Jio ಟೆಲಿಕಾಂನ ಈ ಕಡಿಮೆ ಬೆಲೆಯ ರೀಚಾರ್ಜ್‌ನಲ್ಲಿ 70 ದಿನಗಳ ವ್ಯಾಲಿಡಿಟಿ ಖಚಿತ

HIGHLIGHTS

ಜಿಯೋ ಟೆಲಿಕಾಂನ ಈ ಪ್ಲಾನ್‌ ಬಜೆಟ್‌ ದರದಲ್ಲಿ ಬೆಸ್ಟ್‌ ಎನಿಸಿದೆ

ಜಿಯೋ ಟೆಲಿಕಾಂನ 666 ರೂ.ಗಳ ಪ್ಲಾನ್‌ನಲ್ಲಿ 70 ದಿನಗಳ ವ್ಯಾಲಿಡಿಟಿ ಲಭ್ಯ

ಈ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ

Jio ಟೆಲಿಕಾಂನ ಈ ಕಡಿಮೆ ಬೆಲೆಯ ರೀಚಾರ್ಜ್‌ನಲ್ಲಿ 70 ದಿನಗಳ ವ್ಯಾಲಿಡಿಟಿ ಖಚಿತ

ಜಿಯೋ ಕೆಲವು ಅಗ್ಗದ ಹಾಗೂ ಆಕರ್ಷಕ ಪ್ಲಾನ್‌ಗಳ ಮೂಲಕ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ Jio ಕಂಪನಿಯು ಏರ್‌ಟೆಲ್‌ ಹಾಗೂ ವಿ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಜಿಯೋ ಯೋಜನೆಗಳ ಲಿಸ್ಟ್‌ನಲ್ಲಿ ಬಜೆಟ್‌ ಬೆಲೆಯಲ್ಲಿ ದೀರ್ಘಾವಧಿ ವ್ಯಾಲಿಡಿಟಿ ಪಡೆದ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಹೆಚ್ಚಿನ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ನಿಗದಿತ ಡೇಟಾ ಪ್ರಯೋಜನ ನೀಡುವ ಯೋಜನೆಗಳು ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಜಿಯೋ ಟೆಲಿಕಾಂನ 666 ರೂ.ಗಳ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 70 ದಿನಗಳ ವ್ಯಾಲಿಡಿಟಿ ಸಹ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 666 ರೂ.ಗಳ ಪ್ಲಾನ್‌ ಹಾಗೂ ಇತರೆ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Boat ಕಂಪನಿಯಿಂದ ಕೈಗೆಟುಕುವ ಬೆಲೆಯಲ್ಲಿ ಸ್ಮಾರ್ಟ್ ಪ್ರೊಜೆಕ್ಟರ್ ಬಿಡುಗಡೆ! ಫೀಚರ್ಸ್‌ ಹೀಗಿವೆ

Jio ಟೆಲಿಕಾಂನ 666 ರೂ.ಗಳ ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 666 ರೂ.ಗಳ ವಾರ್ಷಿಕ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 70 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

Jio

ಜಿಯೋದ ಇತರೆ ಅತ್ಯುತ್ತಮ ಯೋಜನೆಗಳು

ಜಿಯೋ ಟೆಲಿಕಾಂನ 579 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

ಜಿಯೋ ಟೆಲಿಕಾಂನ 299 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಲಭ್ಯವಾಗುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

ಜಿಯೋ ಟೆಲಿಕಾಂನ 319 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo