Jio Telecom: ಬಜೆಟ್‌ ಬೆಲೆಗೆ ಲಭ್ಯವಿರುವ 84 ದಿನಗಳ ವ್ಯಾಲಿಡಿಟಿಯ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

HIGHLIGHTS

ಜಿಯೋ ಟೆಲಿಕಾಂನ ಈ ಪ್ಲಾನ್‌ಗಳಲ್ಲಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯ

ಜಿಯೋ ಟೆಲಿಕಾಂನ ಈ ಯೋಜನೆಗಳು ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಹೊಂದಿವೆ

ಜಿಯೋದ ಈ ಪ್ಲಾನ್‌ಗಳಲ್ಲಿ ಪ್ರತಿದಿನ 100 SMS ಪ್ರಯೋಜನ ದೊರೆಯುತ್ತದೆ

Jio Telecom: ಬಜೆಟ್‌ ಬೆಲೆಗೆ ಲಭ್ಯವಿರುವ 84 ದಿನಗಳ ವ್ಯಾಲಿಡಿಟಿಯ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

ಜನಪ್ರಿಯ Jio Telecom ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಪ್ರೀಪೇಯ್ಡ್‌ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ 1,000 ರೂಗಳ ಒಳಗೆ ಲಭ್ಯವಿರುವ ಕೆಲವು ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿವೆ. ಅದರಲ್ಲಿಯೂ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿರುವ ಪ್ರೀಪೇಯ್ಡ್‌ ಯೋಜನೆಗಳು ಟ್ರೆಂಡ್‌ನಲ್ಲಿ ಗುರುತಿಸಿಕೊಂಡಿವೆ. ಈ ಯೋಜನೆಗಳು ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಸಹ ಪಡೆದುಕೊಂಡಿವೆ. ಹಾಗೆಯೇ ಕೆಲವು ಪ್ಲಾನ್‌ಗಳು ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನ ಸಹ ಒಳಗೊಂಡಿವೆ. ಹಾಗಾದರೆ 1,000 ರೂಗಳ ಒಳಗೆ ಲಭ್ಯವಿರುವ ಜಿಯೋ ಟೆಲಿಕಾಂನ 84 ದಿನಗಳ ಮಾನ್ಯತೆಯ ಅತ್ಯುತ್ತಮ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

Digit.in Survey
✅ Thank you for completing the survey!

Also Read : ಇಂದು Oppo K14 5G ಫಸ್ಟ್‌ ಸೇಲ್‌ ಪ್ರಾರಂಭ! ಬೆಲೆ ಹಾಗೂ ಫೀಚರ್ಸ್‌ ಮಾಹಿತಿ

Jio Telecom ನ 859 ರೂಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 859 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 168GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

Jio Telecom

Jio ಟೆಲಿಕಾಂನ 949 ರೂಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 949 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 168GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಪ್ಲಾನ್‌ 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಜಿಯೋ ಹಾಟ್‌ಸ್ಟಾರ್‌, JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

Jio ಟೆಲಿಕಾಂನ 889 ರೂಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 889 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 1,5GB ಡೇಟಾ ಪ್ರಯೋಜನ ಲಭ್ಯವಾಗಲಿದೆ ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 126GB Data ಸೌಲಭ್ಯ ದೊರೆಯುತ್ತದೆ. ಇನ್ನು ಈ ಪ್ರೀಪೇಯ್ಡ್‌ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ದೊರೆಯುತ್ತದೆ. ಹಾಗೆಯೇ ಈ ಪ್ಲಾನಿನಲ್ಲಿ JioSaavn Pro, JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo