Jio ಕಂಪನಿಯ 1000 ರೂ.ಗಳ ಒಳಗೆ ಲಭ್ಯವಿರುವ ಅತ್ಯುತ್ತಮ ರೀಚಾರ್ಜ್‌ ಪ್ಲಾನ್‌ಗಳು ಇಲ್ಲಿವೆ ನೋಡಿ

HIGHLIGHTS

1000 ರೂ.ಗಳ ಒಳಗಿನ ಅತ್ಯುತ್ತಮ ಜಿಯೋ ಪ್ಲಾನ್‌ಗಳು

ಜಿಯೋ ಟೆಲಿಕಾಂನ ಈ ಯೋಜನೆಗಳಲ್ಲಿ ಆಕರ್ಷಕ ವ್ಯಾಲಿಡಿಟಿ

ಜಿಯೋ ಟೆಲಿಕಾಂನ ಈ ಪ್ಲಾನ್‌ಗಳಲ್ಲಿ ಉಚಿತ ವಾಯ್ಸ್‌ ಕರೆ ಸೌಲಭ್ಯ

Jio ಕಂಪನಿಯ 1000 ರೂ.ಗಳ ಒಳಗೆ ಲಭ್ಯವಿರುವ ಅತ್ಯುತ್ತಮ ರೀಚಾರ್ಜ್‌ ಪ್ಲಾನ್‌ಗಳು ಇಲ್ಲಿವೆ ನೋಡಿ

ಜಿಯೋ (Jio) ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾಗಿದ್ದು, ತನ್ನ ಆಕರ್ಷಕ ಪ್ರೀಪೇಯ್ಡ್ ಯೋಜನೆಗಳ ಮೂಲಕ ಕೋಟ್ಯಂತರ ಗ್ರಾಹಕರನ್ನು ಸೆಳೆದಿದೆ. ಅಲ್ಲದೇ ಕಂಪನಿಯು ಕೆಲವು ಅಧಿಕ ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಪ್ಲಾನ್‌ಗಳ ಮೂಲಕ ವಿ ಟೆಲಿಕಾಂ ಹಾಗೂ ಏರ್‌ಟೆಲ್‌ ಟೆಲಿಕಾಂ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಜಿಯೋ ಟೆಲಿಕಾಂನ ದೈನಂದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಅಧಿಕ ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ 1000 ರೂ.ಗಳ ಒಳಗಿನ ಕೆಲವು ಪ್ಲಾನ್‌ಗಳು ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ಜಿಯೋ ಟೆಲಿಕಾಂನ 1000 ರೂ.ಗಳ ಯೋಜನೆಯಲ್ಲಿ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಭಾರತದಲ್ಲಿ OnePlus N6x ಸ್ಮಾರ್ಟ್‌ಫೋನ್‌ ಬಿಡುಗಡೆ! 7,000mAh ಸಾಮರ್ಥ್ಯದ ಬ್ಯಾಟರಿ

Jio 999 ರೂ.ಗಳ ಪ್ಲಾನ್‌ ಮಾಹಿತಿ

ಜಿಯೋ ಟೆಲಿಕಾಂನ 999 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 98 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್‌ ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

Jio internet plan, Jio latest plan 2026
Created Using AI

ಜಿಯೋ ಸಂಸ್ಥೆಯ 899 ರೂ.ಗಳ ಯೋಜನೆ

ಜಿಯೋ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ (+20GB) ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಜಿಯೋ ಹಾಟ್‌ಸ್ಟಾರ್‌ ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

ಜಿಯೋ ಸಂಸ್ಥೆಯ 749 ರೂ.ಗಳ ಪ್ಲಾನ್‌ ಮಾಹಿತಿ

ಜಿಯೋ ಟೆಲಿಕಾಂನ 749 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ (+20GB) ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್‌ ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

ಜಿಯೋ ಸಂಸ್ಥೆಯ 719 ರೂ.ಗಳ ಪ್ಲಾನ್‌ ಮಾಹಿತಿ

ಜಿಯೋ ಟೆಲಿಕಾಂನ 719 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಸಿಗುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್‌ ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile