ಪ್ರತಿದಿನ 2GB ಡೇಟಾ ನೀಡುವ Jio ರೀಚಾರ್ಜ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

HIGHLIGHTS

ಜಿಯೋ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ

ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಸೌಲಭ್ಯ

ಜಿಯೋದ ಈ ಯೋಜನೆಯಲ್ಲಿ ಪ್ರತಿದಿನ 100 SMS ದೊರೆಯುತ್ತದೆ

ಪ್ರತಿದಿನ 2GB ಡೇಟಾ ನೀಡುವ Jio ರೀಚಾರ್ಜ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

Jio ಟೆಲಿಕಾಂ ಈಗಾಗಲೇ ದೇಶೀಯ ಮಾರುಕಟ್ಟೆಯಲ್ಲಿ ವಿ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಭಿನ್ನ ದರದಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಸಂಸ್ಥೆಯು ಪ್ರತಿದಿನ ಡೇಟಾ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಪಟ್ಟಿ ಸಹ ಒಳಗೊಂಡಿದೆ. ಹಾಗೆಯೇ ಜಿಯೋ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ಓಟಿಟಿ ಚಂದಾದಾರಿಕೆ ಒಳಗೊಂಡ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಅನಿಯಮಿತ ಡೇಟಾ ಪ್ರಯೋಜನ ಹೊಂದಿರುವ ರೀಚಾರ್ಜ್‌ ಯೋಜನೆಗಳು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೆ ಜಿಯೋ ಟೆಲಿಕಾಂನ ಪ್ರತಿದಿನ 2GB ಡೇಟಾ ಸೌಲಭ್ಯದ ಅತ್ಯುತ್ತಮ ಪ್ಲಾನ್‌ಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Redmi Note 15 SE ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ! ಈ ಆಫರ್‌ ಮಿಸ್‌ ಮಾಡ್ಕೋಬೇಡಿ

Jio 719 ರೂ.ಗಳ ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 719 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 70 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಜಿಯೋ ಟಿವಿ ಚಂದಾದಾರಿಕೆ ಸಹ ಲಭ್ಯ.

jio

ಜಿಯೋ 749 ರೂ.ಗಳ ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 749 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 72 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಜಿಯೋ ಟಿವಿ ಚಂದಾದಾರಿಕೆ ಸಹ ಲಭ್ಯ.

ಜಿಯೋ 899 ರೂ.ಗಳ ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಜಿಯೋ ಟಿವಿ ಚಂದಾದಾರಿಕೆ ಸಹ ಲಭ್ಯ.

ಜಿಯೋ 859 ರೂ.ಗಳ ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಜಿಯೋ ಟಿವಿ ಚಂದಾದಾರಿಕೆ ಸಹ ಲಭ್ಯ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile