ದೇಶದ ಮೂರನೇ ದೊಡ್ಡ ಟೆಲಿಕಾಂ ಎನಿಸಿರುವ (ವೊಡಾಫೋನ್ ಐಡಿಯಾ) Vi ಸಂಸ್ಥೆಯು ಹಲವು ಅನುಕೂಲಕರ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸಿ ತನ್ನದೇ ಬಳಕೆದಾರರ ಬಳಗ ಹೊಂದಿದೆ. ಹೀಗೆ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಿರುವ ವಿ ಟೆಲಿಕಾಂ ಆಕರ್ಷಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್ ಸಹ ಒಳಗೊಂಡಿದೆ. ವಿ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ಪ್ರೀಪೇಯ್ಡ್ ಯೋಜನೆಗಳು ಬೊಂಬಾಟ್ ಎನಿಸಿವೆ. ಆ ಪೈಕಿ ವಿ ಟೆಲಿಕಾಂನ ಹೆಚ್ಚಿನ ವ್ಯಾಲಿಡಿಟಿ ಪ್ರಯೋಜನ ಪಡೆದಿರುವ ಯೋಜನೆಗಳು ಬೇಡಿಕೆಯಲ್ಲಿ ಇವೆ. ಹಾಗಾದರೆ ವಿ ಟೆಲಿಕಾಂನ ಅಧಿಕ ವ್ಯಾಲಿಡಿಟಿ ಪಡೆದ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : Realme P4R 5G ಮೊಬೈಲ್ ಲಾಂಚ್‌ಗೆ ದಿನಾಂಕ ನಿಗದಿ; 8,000mAh ಬ್ಯಾಟರಿ ಸೌಲಭ್ಯ
ವಿ ಟೆಲಿಕಾಂನ 3599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ವಿಕೇಂಡ್ ಡೇಟಾ ರೋಲ್ ಓವರ್ ಸೌಲಭ್ಯ ಸಿಗಲಿದೆ.
ವಿ ಕಂಪನಿಯ 3999 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ ಅಮೆಜಾನ್ ಪ್ರೈಮ್ ಲೈಟ್ ಹಾಗೂ ಜಿಯೋ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.
ವಿ ಟೆಲಿಕಾಂನ 3699 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ. ಹಾಗೆಯೇ ಜಿಯೋ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.
ವಿ ಕಂಪನಿಯ 3799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಸಿಗಲಿದೆ. ಅಲ್ಲದೇ ಅಮೆಜಾನ್ ಪ್ರೈಮ್ ಲೈಟ್ ಚಂದಾದಾರಿಕೆ ಲಭ್ಯ.