ಕಡಿಮೆ ಬೆಲೆಯಲ್ಲಿ 28 ದಿನಗಳ ಮಾನ್ಯತೆ ಪಡೆದ Vi ಟೆಲಿಕಾಂನ ರೀಚಾರ್ಜ್‌ ಯೋಜನೆಗಳ ಮಾಹಿತಿ

HIGHLIGHTS

ವಿ ಟೆಲಿಕಾಂನ ಈ ರೀಚಾರ್ಜ್‌ ಪ್ಲಾನ್‌ಗಳಲ್ಲಿ 28 ದಿನಗಳ ಮಾನ್ಯತೆ

ಈ ರೀಚಾರ್ಜ್ ಪ್ಲಾನ್‌ಗಳಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಸೌಲಭ್ಯ

ವಿ ಟೆಲಿಕಾಂನ ಈ ಪ್ಲಾನ್‌ಗಳಲ್ಲಿ ಪ್ರತಿದಿನ 100 SMS ದೊರೆಯುತ್ತದೆ

ಕಡಿಮೆ ಬೆಲೆಯಲ್ಲಿ 28 ದಿನಗಳ ಮಾನ್ಯತೆ ಪಡೆದ Vi ಟೆಲಿಕಾಂನ ರೀಚಾರ್ಜ್‌ ಯೋಜನೆಗಳ ಮಾಹಿತಿ

ವೊಡಾಫೋನ್‌ ಐಡಿಯಾ (Vi) ಟೆಲಿಕಾಂ ಅಗ್ಗದ ಬೆಲೆಯಿಂದ ದುಬಾರಿ ದರದ ರೇಂಜ್‌ನಲ್ಲಿ ಹಲವು ರೀಚಾರ್ಜ್‌ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಹೀಗೆ ಹಲವು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಯೋಜನೆಗಳನ್ನು ಪರಿಚಯಿಸಿರುವ ವಿ ಟೆಲಿಕಾಂ ಆಕರ್ಷಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್‌ ಸಹ ಒಳಗೊಂಡಿದೆ. ವಿ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಅಗ್ಗದ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ಪ್ರೀಪೇಯ್ಡ್‌ ಯೋಜನೆಗಳು ಅತ್ಯುತ್ತಮ ಎನಿಸಿವೆ. ಆ ಪೈಕಿ ವಿ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ಯೋಜನೆಗಳು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ವಿ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಇರುವ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Lava Bold N2 5G ಸ್ಮಾರ್ಟ್‌ಫೋನ್‌! ಕಡಿಮೆ ಬೆಲೆಗೆ ಲಭ್ಯ

Vi ಸಂಸ್ಥೆಯ 399 ರೂ.ಗಳ ಪ್ಲಾನ್‌ ಮಾಹಿತಿ

ವಿ ಟೆಲಿಕಾಂನ 399 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ JioHotstar ಚಂದಾದಾರಿಕೆ ಸಹ ಲಭ್ಯ.

Vi

ವಿ ಟೆಲಿಕಾಂನ 419 ರೂ.ಗಳ ಯೋಜನೆ

ವಿ ಟೆಲಿಕಾಂ ಸಂಸ್ಥೆಯ 419 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

ವಿ ಟೆಲಿಕಾಂನ 349 ರೂ.ಗಳ ಪ್ಲಾನ್‌ ಮಾಹಿತಿ

ವಿ ಕಂಪನಿಯ 349 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ ಡೇಟಾ ರೋಲ್‌ ಓವರ್ ಸೌಲಭ್ಯ ಸಹ ಸಿಗಲಿದೆ.

ವಿ ಟೆಲಿಕಾಂನ 365 ರೂ.ಗಳ ಪ್ಲಾನ್‌ ಮಾಹಿತಿ

ವಿ ಕಂಪನಿಯ 365 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಸಿಗಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile