Vi ಕಂಪನಿಯ ಬಜೆಟ್‌ ಬೆಲೆಯ ಅತ್ಯುತ್ತಮ ರೀಚಾರ್ಜ್‌ ಯೋಜನೆಗಳು ಇಲ್ಲಿವೆ ನೋಡಿ

HIGHLIGHTS

1000 ರೂ.ಗಳ ಒಳಗೆ ಸಿಗುವ ಬೆಸ್ಟ್‌ ವಿ ಟೆಲಿಕಾಂ ಯೋಜನೆಗಳು

ವಿ ಟೆಲಿಕಾಂನ ಈ ಯೋಜನೆಯಲ್ಲಿ ಆಕರ್ಷಕ ವ್ಯಾಲಿಡಿಟಿ

ವಿ ಟೆಲಿಕಾಂನ ಈ ಪ್ಲಾನಿನಲ್ಲಿ ಉಚಿತ ವಾಯ್ಸ್‌ ಕರೆ ಸೌಲಭ್ಯ

Vi ಕಂಪನಿಯ ಬಜೆಟ್‌ ಬೆಲೆಯ ಅತ್ಯುತ್ತಮ ರೀಚಾರ್ಜ್‌ ಯೋಜನೆಗಳು ಇಲ್ಲಿವೆ ನೋಡಿ

ಜನಪ್ರಿಯ Vi ಸಂಸ್ಥೆಯು ಕೆಲವು ಆಕರ್ಷಕ ಪ್ಲಾನ್‌ಗಳ ಮೂಲಕ ತನ್ನದೇ ಗ್ರಾಹಕ ಬಳಗವನ್ನು ಒಳಗೊಂಡಿದೆ. ಅಲ್ಲದೇ ಸಂಸ್ಥೆಯು ಕೆಲವು ಅಧಿಕ ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಪ್ಲಾನ್‌ಗಳ ಮೂಲಕ ಜಿಯೋ ಟೆಲಿಕಾಂ ಹಾಗೂ ಏರ್‌ಟೆಲ್‌ ಟೆಲಿಕಾಂ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ವಿ ಟೆಲಿಕಾಂನ ದೈನಂದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಅಧಿಕ ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ 1000 ರೂ.ಗಳ ಒಳಗಿನ ಕೆಲವು ಯೋಜನೆಗಳಲ್ಲಿ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ 1000 ರೂ.ಗಳ ಯೋಜನೆಯಲ್ಲಿ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 50MP ಕ್ಯಾಮೆರಾ ಇರುವ Oppo F33 5G ಮೊಬೈಲ್‌ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

Vi 979 ರೂ.ಗಳ ಪ್ಲಾನ್‌ ಮಾಹಿತಿ

ವಿ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಸೋನಿ ಲೈವ್‌, ಜೀ5 ಸೇರಿದಂತೆ 19 ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

Vi Prepaid Recharge Plans Under Rs 1000

ವಿ ಸಂಸ್ಥೆಯ 859 ರೂ.ಗಳ ಪ್ಲಾನ್‌ ಮಾಹಿತಿ

ವಿ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ವೀಕೇಂಡ್‌ ಡೇಟ್ ರೋಲ್‌ ಓವರ್‌ ಸೌಲಭ್ಯ ಲಭ್ಯವಾಗಲಿವೆ.

ವಿ ಸಂಸ್ಥೆಯ 670 ರೂ.ಗಳ ಪ್ಲಾನ್‌ ಮಾಹಿತಿ

ವಿ ಟೆಲಿಕಾಂನ 670 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.

ವಿ ಸಂಸ್ಥೆಯ 419 ರೂ.ಗಳ ಪ್ಲಾನ್‌ ಮಾಹಿತಿ

ವಿ ಟೆಲಿಕಾಂನ 419 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಟ್ಟಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಸೋನಿ ಲೈವ್‌, ಜೀ5 ಸೇರಿದಂತೆ 19 ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile