Vi ಟೆಲಿಕಾಂನ ಈ ಬಜೆಟ್ ಬೆಲೆಯ ರೀಚಾರ್ಜ್ ಪ್ಲಾನಿನಲ್ಲಿ ಸಖತ್ ಡೇಟಾ ಸೌಲಭ್ಯ ಖಚಿತ!
ದೇಶದ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆ ಎನಿಸಿರುವ Vi ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಹಾಗೂ ಜಿಯೋ ಸಂಸ್ಥೆಗಳಿಗೆ ನೇರ ಟಾಂಗ್ ನೀಡಿದೆ. ಆ ಪೈಕಿ ವಿ ಟೆಲಿಕಾಂ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ವ್ಯಾಲಿಡಿಟಿ ಜೊತೆಗೆ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಕಂಪನಿಯ 1005 ರೂ.ಗಳ ಪ್ಲಾನ್‌ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ 1005 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Vi ಸಂಸ್ಥೆಯ 1005 ರೂ.ಗಳ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 1005 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.
ವಿ ಟೆಲಿಕಾಂನ 1599 ರೂ.ಗಳ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ 1599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ನೆಟ್‌ಫ್ಲಿಕ್ಸ್ ಬೇಸಿಕ್ ಚಂದಾದಾರಿಕೆ ಲಭ್ಯ.
ವಿ ಸಂಸ್ಥೆಯ 2099 ರೂ.ಗಳ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 2099 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 180 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.