Vi ಟೆಲಿಕಾಂನ 1198 ರೂ.ಗಳ ಪ್ಲಾನ್ ರೀಚಾರ್ಜ್‌ ಮಾಡಿದ್ರೆ, ನೆಟ್‌ಫ್ಲಿಕ್ಸ್‌ ಜೊತೆಗೆ 70 ದಿನ ವ್ಯಾಲಿಡಿಟಿ!

HIGHLIGHTS

ವಿ ಸಂಸ್ಥೆಯ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ

ವಿ ಟೆಲಿಕಾಂನ 1198 ರೂ.ಗಳ ಪ್ಲಾನ್‌ನಲ್ಲಿ 70 ದಿನಗಳ ವ್ಯಾಲಿಡಿಟಿ

ವಿ ಟೆಲಿಕಾಂನ ಈ ಯೋಜನೆಯಲ್ಲಿ ನೆಟ್‌ಫ್ಲಿಕ್ಸ್‌ ಬೇಸಿಕ್‌ ಚಂದಾದಾರಿಕೆ ಪ್ರಯೋಜನ

ದೇಶದ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆ ಎಂದು ಗುರುತಿಸಿಕೊಂಡಿರುವ ವೊಡಾಫೋನ್‌ ಐಡಿಯಾ (Vi) ಭಿನ್ನ ಡೇಟಾ ಸೌಲಭ್ಯದ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಬೊಂಬಾಟ್‌ ಯೋಜನೆಗಳ ಈ ಮೂಲಕ ಏರ್‌ಟೆಲ್‌ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ವಿ ಟೆಲಿಕಾಂ ಕಂಪನಿಯ ಪ್ಲಾನ್‌ಗಳ ಪೈಕಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ Data ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು ಗ್ರಾಹಕರನ್ನು ಆಕರ್ಷಿಸಿವೆ. ಅದರಲ್ಲೂ ಮುಖ್ಯವಾಗಿ ದೈನಂದಿನ ಡೇಟಾ ಪ್ರಯೋಜನದೊಂದಿಗೆ ನೆಟ್‌ಫ್ಲಿಕ್ಸ್‌ ಓಟಿಟಿ ಚಂದಾದಾರಿಕೆ ಸೌಲಭ್ಯ ಪಡೆದ 1198 ರೂ. ಗಳ ಪ್ಲಾನ್‌ ಹೆಚ್ಚು ಟ್ರೆಂಡ್‌ನಲ್ಲಿ ಇದೆ. ಹಾಗಾದರೆ Vi ಟೆಲಿಕಾಂನ 1198 ರೂ. ಗಳ ಯೋಜನೆ ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಅಮೆಜಾನ್‌ Prime Day 2026: ಪ್ರಮುಖ ಬ್ರಾಂಡ್‌ಗಳ ಸ್ಮಾರ್ಟ್‌ಟಿವಿ ಬೆಲೆಯಲ್ಲಿ ಭಾರೀ ಡಿಸ್ಕೌಂಟ್‌

Vi ಸಂಸ್ಥೆಯ 1198 ರೂ.ಗಳ ಪ್ಲಾನ್ ಮಾಹಿತಿ

ವೊಡಾಫೋನ್‌ ಐಡಿಯಾ ಕಂಪನಿಯ 1198 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್‌ ದರದಲ್ಲಿ ಅಧಿಕ ಡೇಟಾ ಹಾಗೂ ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ ಸೂಕ್ತ ಎನ್ನಬಹುದು. ಹಾಗೆಯೇ ಈ ಯೋಜನೆಯು ನೆಟ್‌ಫ್ಲಿಕ್ಸ್‌ ಬೇಸಿಕ್‌ ಚಂದಾದಾರಿಕೆ ಪಡೆದುಕೊಂಡಿದೆ.

ವಿ ಟೆಲಿಕಾಂನ 994 ರೂ.ಗಳ ಯೋಜನೆ ಮಾಹಿತಿ

ವೊಡಾಫೋನ್‌ ಐಡಿಯಾ ಕಂಪನಿಯ 994 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಡೇಟಾ ಸೇವೆಯ ಜೊತೆಗೆ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ ಸೂಪರ್ ಎನ್ನಬಹುದು. ಹಾಗೆಯೇ ಈ ಯೋಜನೆಯು ಜಿಯೋ ಹಾಟ್‌ಸ್ಟಾರ್ ಚಂದಾದಾರಿಕೆ ಪಡೆದುಕೊಂಡಿದೆ.

ವಿ ಟೆಲಿಕಾಂನ 859 ರೂ.ಗಳ ಯೋಜನೆ ಮಾಹಿತಿ

ವೊಡಾಫೋನ್‌ ಐಡಿಯಾ ಕಂಪನಿಯ 859 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 1.5GB Data ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಡೇಟಾ ಸೇವೆಯ ಜೊತೆಗೆ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಸೂಕ್ತ ಎನ್ನಬಹುದು.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :