70 ದಿನಗಳ ವ್ಯಾಲಿಡಿಟಿ ಹೊಂದಿರುವ Vi ಟೆಲಿಕಾಂನ ಈ ಪ್ಲಾನ್ ರೀಚಾರ್ಜ್ಗೆ ಉತ್ತಮವೇ?
ದೇಶದ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆ ಎನಿಸಿರುವ Vi (ವೊಡಾಫೋನ್ ಐಡಿಯಾ) ಕಂಪನಿಯು ತನ್ನ ಗ್ರಾಹಕರಿಗೆ ಭಿನ್ನ ಡೇಟಾ ಪ್ರಯೋಜನದ ಪ್ರೀಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಹಾಗೂ ಜಿಯೋ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡಿದೆ. ಆ ಪೈಕಿ ವಿ ಟೆಲಿಕಾಂ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಕಂಪನಿಯ 1198 ರೂ.ಗಳ ಪ್ಲಾನ್ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ 1198 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Vi ಸಂಸ್ಥೆಯ 1198 ರೂ.ಗಳ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 1198 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ. ಇದರೊಂದಿಗೆ ನೆಟ್ಫ್ಲಿಕ್ಸ್ ಬೇಸಿಕ್ ಚಂದಾದಾರಿಕೆ ಸೌಲಭ್ಯ ಸಹ ಸಿಗುತ್ತದೆ.
ವಿ ಟೆಲಿಕಾಂನ 994 ರೂ.ಗಳ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 994 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯು ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.
ವಿ ಸಂಸ್ಥೆಯ 979 ರೂ.ಗಳ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 300 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.