Vi ಟೆಲಿಕಾಂನ ಈ ಪ್ಲಾನಿನಲ್ಲಿ 180 ದಿನಗಳ ವ್ಯಾಲಿಡಿಟಿ ಜೊತೆಗೆ Unlimited ಡೇಟಾ! ಬೆಲೆ ಎಷ್ಟು?
ವೊಡಾಫೋನ್ ಐಡಿಯಾದ ಈ ಪ್ಲ್ಯಾನಿನಲ್ಲಿ ಅನಿಯಮಿತ ಡೇಟಾ ಲಭ್ಯ
ವಿ ಟೆಲಿಕಾಂನ 2099 ರೂ.ಗಳ ಪ್ಲಾನ್‌ನಲ್ಲಿ 180 ದಿನಗಳ ವ್ಯಾಲಿಡಿಟಿ
ವೊಡಾಫೋನ್ ಐಡಿಯಾ ಟೆಲಿಕಾಂನ ಈ ಪ್ಲಾನಿನಲ್ಲಿ ಪ್ರತಿದಿನ 100 SMS ಸಿಗುತ್ತದೆ
Vodafone Idea (Vi) ಟೆಲಿಕಾಂ ಸಂಸ್ಥೆ ದೇಶೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ವಿ ಟೆಲಿಕಾಂ ಬಳಕೆದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಭಿನ್ನ ಬೆಲೆಯ ರೀಚಾರ್ಜ್ ಯೋಜನೆಗಳ ಲಿಸ್ಟ್ ಒಳಗೊಂಡಿದೆ. ವಿ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ಕಡಿಮೆ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಅಧಿಕ ವ್ಯಾಲಿಡಿಟಿ ಜೊತೆಗೆ ಡೇಟಾ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಪ್ಲಾನ್‌ಗಳು ಬೇಡಿಕೆಯಲ್ಲಿ ಇವೆ. ಆ ಪೈಕಿ ವಿ ಟೆಲಿಕಾಂನ 2099 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಬಜೆಟ್ ಬೆಲೆಯ ಮೂಲಕ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 180 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ವಿ ಟೆಲಿಕಾಂನ 2099 ರೂ.ಗಳ ಪ್ಲಾನ್ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಅಗ್ಗದ ದರದ Redmi A7 Pro 5G ಮೊಬೈಲ್ ಈಗ ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ!
Vi ಟೆಲಿಕಾಂನ 2099 ರೂ.ಗಳ ಯೋಜನೆ
ವೊಡಾಫೋನ್ ಐಡಿಯಾ ಟೆಲಿಕಾಂನ 2099 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 180 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ.

ವೊಡಾಫೋನ್ ಐಡಿಯಾದ ಇತರೆ ಆಕರ್ಷಕ ಯೋಜನೆಗಳ ಮಾಹಿತಿ
ವೊಡಾಫೋನ್ ಐಡಿಯಾ ಟೆಲಿಕಾಂನ 3749 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ.
ವಿ ಟೆಲಿಕಾಂನ 1599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ.
ವಿ ಟೆಲಿಕಾಂನ 1005 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಸಿಗುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile