ಜನಪ್ರಿಯ Vi ಟೆಲಿಕಾಂ ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ತನ್ನದೇ ಗ್ರಾಹಕ ಬಳಗವನ್ನು ಹೊಂದಿದೆ. ಅಲ್ಲದೇ ಸಂಸ್ಥೆಯು ಕೆಲವು ಅಧಿಕ ಡೇಟಾ ಹಾಗೂ ದೀರ್ಘ ವ್ಯಾಲಿಡಿಟಿ ಯೋಜನೆಗಳ ಮೂಲಕ ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ವಿ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳು ಅಧಿಕ ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ ಸಂಸ್ಥೆಯ ಬಜೆಟ್ ಪ್ರೈಸ್‌ನ ಕೆಲವು ಯೋಜನೆಗಳಲ್ಲಿ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಆ ಪೈಕಿ 2249 ರೂ.ಗಳ ಪ್ಲಾನ್ ಗಮನ ಸೆಳೆದಿದೆ. ಹಾಗಾದರೆ ವಿ ಟೆಲಿಕಾಂನ 2249 ರೂ.ಗಳ ಯೋಜನೆಯಲ್ಲಿ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ದೇಶೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಗುತ್ತಿದೆ Redmi Turbo 6 ಸ್ಮಾರ್ಟ್‌ಫೋನ್ ಸರಣಿ!
ವಿ ಟೆಲಿಕಾಂನ 2249 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಒಟ್ಟು 30GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 3600 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.
ವಿ ಟೆಲಿಕಾಂನ 3599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಡೇಟಾ ಸೌಲಭ್ಯದೊಂದಿಗೆ ವಾರ್ಷಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಅತ್ಯುತ್ತಮ ಎನಿಸುತ್ತದೆ.
ವಿ ಟೆಲಿಕಾಂನ 3999 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್ ಹಾಗೂ ಅಮೆಜಾನ್ ಪ್ರೈಮ್ ಲೈಟ್ ಸೌಲಭ್ಯ ಸಿಗಲಿದೆ. ಡೇಟಾ ಸೌಲಭ್ಯದೊಂದಿಗೆ ವಾರ್ಷಿಕ ವ್ಯಾಲಿಡಿಟಿ ಅಗತ್ಯ ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.