Vi ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಟೆಲಿಕಾಂ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಕಡಿಮೆ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಪ್ಲಾನ್‌ಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಪಟ್ಟಿಯಲ್ಲಿ 299 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ಪ್ರಮುಖವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಯೋಜನೆ ಆಕರ್ಷಕ ಪ್ಲಾನ್ ಎನಿಸಬಹುದು. ಹಾಗಾದರೆ ವಿ ಟೆಲಿಕಾಂನ 299 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Also Read : ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Redmi 17C 5G ಮೊಬೈಲ್; 6,000mAh ಬ್ಯಾಟರಿ ಸೌಲಭ್ಯ
ವಿ ಟೆಲಿಕಾಂನ 299 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 1GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು.
ವಿ ಟೆಲಿಕಾಂನ 349 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ವಿ ಟೆಲಿಕಾಂನ 379 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಕೂಡಾ ಲಭ್ಯ.
ವಿ ಟೆಲಿಕಾಂನ 398 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.