Vi ಟೆಲಿಕಾಂನ 408 ರೂ.ಗಳ ರೀಚಾರ್ಜ್‌ ಪ್ಲಾನಿನಲ್ಲಿ ಓಟಿಟಿ ಜೊತೆಗೆ ಅನಿಯಮಿತ ಡೇಟಾ ಸೌಲಭ್ಯ!

Vi ಟೆಲಿಕಾಂನ 408 ರೂ.ಗಳ ರೀಚಾರ್ಜ್‌ ಪ್ಲಾನಿನಲ್ಲಿ ಓಟಿಟಿ ಜೊತೆಗೆ ಅನಿಯಮಿತ ಡೇಟಾ ಸೌಲಭ್ಯ!

ದೇಶದ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆ ಎನಿಸಿರುವ Vi (ವೊಡಾಫೋನ್‌ ಐಡಿಯಾ) ಕಂಪನಿಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್‌ ಹಾಗೂ ಜಿಯೋ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡಿದೆ. ಆ ಪೈಕಿ ವಿ ಟೆಲಿಕಾಂ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಕಂಪನಿಯ 408 ರೂ.ಗಳ ಪ್ಲಾನ್‌ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ 408 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Vi ಸಂಸ್ಥೆಯ 408 ರೂ.ಗಳ ಯೋಜನೆ ಪ್ರಯೋಜನಗಳು

ವಿ ಟೆಲಿಕಾಂನ 408 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.

vi

ವಿ ಟೆಲಿಕಾಂನ 365 ರೂ.ಗಳ ಪ್ಲಾನ್‌ ಪ್ರಯೋಜನಗಳು

ವಿ ಟೆಲಿಕಾಂನ 365 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರ ಜೊತೆಗೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಲಭ್ಯ.

ವಿ ಸಂಸ್ಥೆಯ 379 ರೂ.ಗಳ ಯೋಜನೆ ಪ್ರಯೋಜನಗಳು

ವಿ ಟೆಲಿಕಾಂನ 379 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.

Manthesh B

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile