Vi ಕಂಪನಿಯ 408 ರೂ.ಗಳ ಪ್ಲಾನ್ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ!

HIGHLIGHTS

ವಿ ಸಂಸ್ಥೆಯ 408 ರೂ.ಗಳ ಪ್ಲಾನ್ ಅಗ್ಗದ ಬೆಲೆಯಲ್ಲಿ ಉತ್ತಮ ಆಯ್ಕೆ

ವಿ ಕಂಪನಿಯ ಈ ಪ್ರೀಪೇಯ್ಡ್‌ ಯೋಜನೆಯಲ್ಲಿ ಆಕರ್ಷಕ ಡೇಟಾ ಸೌಲಭ್ಯ

ವಿ ಟೆಲಿಕಾಂನ ಈ ರೀಚಾರ್ಜ್‌ ಪ್ಲಾನ್‌ನಲ್ಲಿ ಉಚಿತ ವಾಯ್ಸ್‌ ಕರೆ ಪ್ರಯೋಜನ

Vi ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್‌ ಸಂಸ್ಥೆ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಅಗ್ಗದ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಪ್ಲಾನ್‌ಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಪಟ್ಟಿಯಲ್ಲಿ 408 ರೂ.ಗಳ ಪ್ರೀಪೇಯ್ಡ್‌ ಪ್ಲಾನ್‌ ಸಹ ಗಮನ ಸೆಳೆಯುತ್ತದೆ. ಪ್ರಮುಖವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಯೋಜನೆ ಆಕರ್ಷಕ ಪ್ಲಾನ್ ಎನಿಸಬಹುದು. ಹಾಗಾದರೆ ವಿ ಟೆಲಿಕಾಂನ 408 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.

Also Read : ಅಮೆಜಾನ್‌ ಸೇಲ್‌ನಲ್ಲಿ ದೈತ್ಯ iQOO 15R ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

Vi 408 ರೂ.ಗಳ ಪ್ಲಾನ್‌ ಪ್ರಯೋಜನಗಳು

ಜಿಯೋ ಟೆಲಿಕಾಂನ 408 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು.

ವಿ ಕಂಪನಿಯ 379 ರೂ.ಗಳ ಪ್ಲಾನ್‌

ವಿ ಟೆಲಿಕಾಂನ 379 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು.

ವಿ ಕಂಪನಿಯ 419 ರೂ.ಗಳ ಪ್ಲಾನ್‌

ವಿ ಟೆಲಿಕಾಂನ 419 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನಿಯಮಿತ ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಕೂಡಾ ಲಭ್ಯ. ಹಾಗೆಯೇ ಸೋನಿ ಲೈವ್‌ ಚಂದಾದಾರಿಕೆಯ ಸೌಲಭ್ಯ ಸಹ ದೊರೆಯುತ್ತದೆ.

ವಿ ಸಂಸ್ಥೆಯ 399 ರೂ.ಗಳ ಪ್ಲಾನ್‌

ವಿ ಟೆಲಿಕಾಂನ 399 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಗ್ರಾಹಕರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರ ಜೊತೆಗೆ ಈ ರೀಚಾರ್ಜ್‌ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :