ಗಮನಿಸಿ! ಈ Vi ರೀಚಾರ್ಜ್ ಪ್ಲಾನ್ನಲ್ಲಿ 50GB ಡೇಟಾ ಜೊತೆಗೆ 60 ದಿನಗಳ ವ್ಯಾಲಿಡಿಟಿ!

ದೇಶದ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆ ಎನಿಸಿರುವ Vi (ವೊಡಾಫೋನ್ ಐಡಿಯಾ) ಕಂಪನಿಯು ತನ್ನ ಗ್ರಾಹಕರಿಗೆ ಭಿನ್ನ ಡೇಟಾ ಪ್ರಯೋಜನದ ಪ್ರೀಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಹಾಗೂ ಜಿಯೋ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡಿದೆ. ಆ ಪೈಕಿ ವಿ ಟೆಲಿಕಾಂ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಕಂಪನಿಯ 625 ರೂ.ಗಳ ಪ್ಲಾನ್ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ 625 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Vi ಸಂಸ್ಥೆಯ 625 ರೂ.ಗಳ ಯೋಜನೆ ಸೌಲಭ್ಯಗಳು
ವಿ ಟೆಲಿಕಾಂನ 625 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 50GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 60 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಯ ಸೌಲಭ್ಯ ಸಹ ಸಿಗಲಿದೆ. ಅಲ್ಲದೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಿಗುತ್ತದೆ.
ವಿ ಟೆಲಿಕಾಂನ 1149 ರೂ.ಗಳ ಯೋಜನೆ ಸೌಲಭ್ಯಗಳು
ವಿ ಟೆಲಿಕಾಂನ 1149 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 15GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 77 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯು ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.
ವಿ ಸಂಸ್ಥೆಯ 979 ರೂ.ಗಳ ಪ್ಲಾನ್ ಸೌಲಭ್ಯಗಳು
ವಿ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 300 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.
Manthesh B
Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್ಇಂಡಿಯಾ ಸಂಸ್ಥೆಯ ಗಿಜ್ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.
View full profile