Vi ಟೆಲಿಕಾಂನ ಈ ಬಜೆಟ್‌ ಬೆಲೆಯ ಪ್ಲಾನಿನಲ್ಲಿ ಡೇಟಾ ಜೊತೆಗೆ ಜನಪ್ರಿಯ ಓಟಿಟಿ ಪ್ರಯೋಜನ

HIGHLIGHTS

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಸೌಲಭ್ಯ

ವಿ ಕಂಪನಿಯ 795 ರೂ.ಗಳ ಪ್ಲಾನ್‌ನಲ್ಲಿ 56 ದಿನಗಳ ವ್ಯಾಲಿಡಿಟಿ

ವಿ ಸಂಸ್ಥೆಯ ಈ ಯೋಜನೆಯಲ್ಲಿ ಓಟಿಟಿ ಸೌಲಭ್ಯ ದೊರೆಯುತ್ತದೆ

ವೊಡಾಫೋನ್‌ ಐಡಿಯಾ (Vi) ಕಂಪನಿಯು ಭಿನ್ನ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿರುವ ವಿ ಟೆಲಿಕಾಂ ಆಕರ್ಷಕ ಡೇಟಾ, ಓಟಿಟಿ ಯೋಜನೆಗಳ ಲಿಸ್ಟ್‌ ಸಹ ಒಳಗೊಂಡಿದೆ. ವಿ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ಕಡಿಮೆ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್‌ ಯೋಜನೆಗಳು ಬೇಡಿಕೆ ಪಡೆದಿವೆ. ಆ ಪೈಕಿ ವಿ ಟೆಲಿಕಾಂನ 795 ರೂ.ಗಳ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆ ಬಜೆಟ್‌ ಬೆಲೆಯಲ್ಲಿ ಆಕರ್ಷಕ ಎನಿಸಿದೆ. ಈ ಬಜೆಟ್ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 56 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ವಿ ಟೆಲಿಕಾಂನ 795 ರೂ.ಗಳ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Also Read : ಜನಪ್ರಿಯ Vivo X200T ಸ್ಮಾರ್ಟ್‌ಫೋನ್‌ ಖರೀದಿಸಲು ಇದುವೇ ಬೆಸ್ಟ್‌ ಟೈಮ್‌!

Vi ಸಂಸ್ಥೆಯ 795 ರೂ.ಗಳ ಯೋಜನೆ

ವಿ ಟೆಲಿಕಾಂನ 795 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಸೋನಿಲೈವ್, ZEE5 + ಸೇರಿದಂತೆ ಹಲವು ಓಟಿಟಿ ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.

ಇತರೆ ಆಕರ್ಷಕ ಯೋಜನೆಗಳ ಮಾಹಿತಿ

ವಿ ಟೆಲಿಕಾಂನ 696 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಮೆಜಾನ್ ಪ್ರೈಮ್‌ ಲೈಟ್‌ ಓಟಿಟಿ ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.

ವಿ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಸೋನಿಲೈವ್, ZEE5 + ಸೇರಿದಂತೆ ಹಲವು ಓಟಿಟಿ ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :