Vi ಸಂಸ್ಥೆಯ ಈ ಪ್ಲಾನ್‌ನಲ್ಲಿ SonyLIV ಮತ್ತು ZEE5 ಜೊತೆಗೆ ನಿತ್ಯ 3GB ಡೇಟಾ ಪ್ರಯೋಜನ!

HIGHLIGHTS

ಅಧಿಕ ಡೇಟಾಗಾಗಿ ವಿ ಟೆಲಿಕಾಂನ 795 ರೂ.ಗಳ ಪ್ಲಾನ್ ಅತ್ಯುತ್ತಮ

ವಿ ಟೆಲಿಕಾಂನ ಈ ರೀಚಾರ್ಜ್‌ ಯೋಜನೆಯಲ್ಲಿ 3GB ಡೇಟಾ ಸಿಗುತ್ತೆ

ವಿ ಟೆಲಿಕಾಂ ಕಂಪನಿಯ ಈ ಪ್ಲಾನ್‌ನಲ್ಲಿ ಉಚಿತ ವಾಯ್ಸ್‌ ಕರೆ ಹಾಗೂ 100 SMS ಸೌಲಭ್ಯ ಲಭ್ಯ

ದೇಶದ ಮೂರನೇ ದೊಡ್ಡ ಟೆಲಿಕಾಂ ಎಂದೇ ಗುರುತಿಸಿಕೊಂಡಿರುವ Vi ಕಂಪನಿಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಪ್ಲಾನ್‌ಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ಏರ್‌ಟೆಲ್‌ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಿದೆ. ಆ ಪೈಕಿ ವಿ ಟೆಲಿಕಾಂನ ಪ್ರತಿದಿನ 3GB ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಸಂಸ್ಥೆಯ 795 ರೂ.ಗಳ ಪ್ಲಾನ್‌ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ 795 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : RCB Edition ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಜ್ಜಾಗಿರುವ Nothing ಮೊಬೈಲ್ ಬ್ರಾಂಡ್‌!

Vi ಸಂಸ್ಥೆಯ 795 ರೂ.ಗಳ ಪ್ಲಾನ್ ಮಾಹಿತಿ

ವಿ ಟೆಲಿಕಾಂನ 795 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ದೈನಂದಿನ 3GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯಲ್ಲಿ SonyLIV, ZEE5 ಸೇರಿದಂತೆ ಕೆಲವು ಜನಪ್ರಿಯ ಓಟಿಟಿ ಚಂದಾದಾರಿಕೆ ಲಭ್ಯ.

ವಿ ಸಂಸ್ಥೆಯ 696 ರೂ.ಗಳ ಪ್ಲಾನ್ ಮಾಹಿತಿ

ವಿ ಟೆಲಿಕಾಂನ 696 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ದೈನಂದಿನ 2GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ Amazon Prime Lite ಓಟಿಟಿ ಚಂದಾದಾರಿಕೆ ಲಭ್ಯ.

ವಿ ಸಂಸ್ಥೆಯ 979 ರೂ.ಗಳ ಪ್ಲಾನ್ ಮಾಹಿತಿ

ವಿ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ SonyLIV, ZEE5 ಸೇರಿ ಇತರೆ ಜನಪ್ರಿಯ ಓಟಿಟಿ ಚಂದಾದಾರಿಕೆ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :