859 ರೂ.ಗಳ ಈ Recharge Plan ನಲ್ಲಿ 84 ದಿನಗಳ ವ್ಯಾಲಿಡಿಟಿ ಹಾಗೂ 126GB ಡೇಟಾ
ವಿ ಟೆಲಿಕಾಂನ ಈ ಪ್ಲಾನ್ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಪಡೆದಿದೆ
ವಿ ಟೆಲಿಕಾಂನ 859 ರೂ.ಗಳ ಯೋಜನೆ ಪ್ರತಿದಿನ 1.5GB ಡೇಟಾ ಸೌಲಭ್ಯ ಒದಗಿಸಲಿದೆ
ವಿ ಟೆಲಿಕಾಂನ ಈ ಯೋಜನೆಯು ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಹೊಂದಿದೆ
Vi ಟೆಲಿಕಾಂ ಜಿಯೋ ಹಾಗೂ ಏರ್‌ಟೆಲ್ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ವಿ ಟೆಲಿಕಾಂ ಈಗಾಗಲೇ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸಂಸ್ಥೆಯ ಕೆಲವು ಪ್ಲಾನ್‌ಗಳು ಅಗ್ಗದ ದರದಲ್ಲಿ ಗಮನ ಸೆಳೆದಿದ್ದರೆ ಮತ್ತೆ ಕೆಲವು ಯೋಜನೆಗಳು ಆಕರ್ಷಕ ಪ್ರಯೋಜನಗಳ ಮೂಲಕ ಸದ್ದು ಮಾಡಿವೆ. ಆ ಪೈಕಿ ವಿ ಟೆಲಿಕಾಂನ 859 ರೂ.ಗಳ ಬೆಲೆಯ ಪ್ರೀಪೇಯ್ಡ್ Recharge Plan ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ದರದ ಯೋಜನೆಯು ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸಹ ಪಡೆದುಕೊಂಡಿದೆ. ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನ ಸಹ ಒಳಗೊಂಡಿದೆ. ಹಾಗಾದರೆ ವಿ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಕಡಿಮೆ ಬೆಲೆಯ POCO C85 5G ಮೊಬೈಲ್ ಈಗ ಇನ್ನಷ್ಟು ಅಗ್ಗದ ದರದಲ್ಲಿ ಲಭ್ಯ! ಈ ಆಫರ್ ನೋಡಿ
Recharge Plan: ವಿ ಟೆಲಿಕಾಂನ 859 ರೂ.ಗಳ ಪ್ಲಾನ್ ಮಾಹಿತಿ
ವಿ ಟೆಲಿಕಾಂನ 859 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 126GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ Vi Movies and TV ಅಪ್ಲಿಕೇಶನ್ ಚಂದಾದಾರಿಕೆ ಸೌಲಭ್ಯ ಲಭ್ಯ. ಅಲ್ಲದೇ ವೀಕೇಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಇದೆ.

ಇತರೆ ಆಕರ್ಷಕ ಯೋಜನೆಗಳ ಮಾಹಿತಿ
ವಿ ಟೆಲಿಕಾಂನ 799 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿಯೂ ಸಹ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 115.5GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 77 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಅಲ್ಲದೇ ವೀಕೇಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಇದೆ.
ವಿ ಟೆಲಿಕಾಂನ 666 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿಯೂ ಸಹ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 99GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 64 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದುಕೊಂಡಿದೆ. ಇನ್ನು ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಅಲ್ಲದೇ ವೀಕೇಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಕೂಡಾ ಇದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile