ಅಧಿಕ ವ್ಯಾಲಿಡಿಟಿಗಾಗಿ Vi ಟೆಲಿಕಾಂನ 998 ರೂ.ಗಳ ಪ್ಲಾನ್‌ ಉತ್ತಮವೇ? ಪ್ರಯೋಜನಗಳ ಮಾಹಿತಿ ಇಲ್ಲಿದೆ

HIGHLIGHTS

ವಿ ಸಂಸ್ಥೆಯ 998 ರೂ.ಗಳ ಪ್ಲಾನ್ ಅತ್ಯುತ್ತಮ ಎನಿಸಿದೆ

ವಿ ಟೆಲಿಕಾಂನ ಈ ರೀಚಾರ್ಜ್‌ ಯೋಜನೆಗಳಲ್ಲಿ ಆಕರ್ಷಕ ವ್ಯಾಲಿಡಿಟಿ

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನ್‌ನಲ್ಲಿ ಉಚಿತ ವಾಯ್ಸ್‌ ಕರೆ ಸೌಲಭ್ಯ

ಅಧಿಕ ವ್ಯಾಲಿಡಿಟಿಗಾಗಿ Vi ಟೆಲಿಕಾಂನ 998 ರೂ.ಗಳ ಪ್ಲಾನ್‌ ಉತ್ತಮವೇ? ಪ್ರಯೋಜನಗಳ ಮಾಹಿತಿ ಇಲ್ಲಿದೆ

Vi (ವೊಡಾಫೋನ್‌ ಐಡಿಯಾ) ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್‌ ಟೆಲಿಕಾಂ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್‌ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಲಿಸ್ಟ್‌ನಲ್ಲಿ 998 ರೂ.ಗಳ ಪ್ರೀಪೇಯ್ಡ್‌ ಪ್ಲಾನ್‌ ಸಹ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಯೋಜನೆ ಆಕರ್ಷಕ ಪ್ಲಾನ್ ಎನಿಸಬಹುದು. ಹಾಗಾದರೆ ವಿ ಟೆಲಿಕಾಂನ 998 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.

Digit.in Survey
✅ Thank you for completing the survey!

Also Read : ಭಾರತದಲ್ಲಿ Lava Bold N4 Pro 5G ಬಿಡುಗಡೆ! ಬಿಗ್ ಬ್ಯಾಟರಿ ಜೊತೆಗೆ ಡ್ಯುಯಲ್ ಕ್ಯಾಮೆರಾ ಸೌಲಭ್ಯ

Vi 998 ರೂ.ಗಳ ಪ್ಲಾನ್‌ ಮಾಹಿತಿ

ವಿ ಟೆಲಿಕಾಂನ 998 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಹಾಗೆಯೇ ಈ ಯೋಜನೆಯಲ್ಲಿ ಸೋನಿ ಲೈವ್‌ ಓಟಿಟಿ ಸೇರಿದಂತೆ ಕೆಲವು ಚಂದಾದಾರಿಕೆ ಲಭ್ಯವಾಗಲಿವೆ.

vi

ವಿ ಸಂಸ್ಥೆಯ 670 ರೂ.ಗಳ ಯೋಜನೆ

ವಿ ಟೆಲಿಕಾಂನ 670 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.

ವಿ ಸಂಸ್ಥೆಯ 795 ರೂ.ಗಳ ಯೋಜನೆ

ವಿ ಟೆಲಿಕಾಂನ 795 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಇದರ ಜೊತೆಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಗ್ರಾಹಕರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಹಾಗೆಯೇ ಈ ಯೋಜನೆಯಲ್ಲಿ ಸೋನಿ ಲೈವ್‌ ಓಟಿಟಿ ಸೇರಿದಂತೆ ಕೆಲವು ಚಂದಾದಾರಿಕೆ ಲಭ್ಯವಾಗಲಿವೆ.

ವಿ ಸಂಸ್ಥೆಯ 696 ರೂ.ಗಳ ಯೋಜನೆ

ವಿ ಟೆಲಿಕಾಂನ 696 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಈ ಯೋಜನೆಯಲ್ಲಿ ಅಮೆಜಾನ್‌ ಪ್ರೈಮ್ ಲೈಟ್ ಓಟಿಟಿ ಸೇರಿದಂತೆ ಕೆಲವು ಚಂದಾದಾರಿಕೆ ಲಭ್ಯವಾಗಲಿವೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile