Vivo ಕಂಪನಿಯ ಈ ಜನಪ್ರಿಯ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಇಳಿಕೆ! 50MP ಕ್ಯಾಮೆರಾ

HIGHLIGHTS

ವಿವೋ X200T ಫೋನ್‌ ಭರ್ಜರಿ ಆಫರ್‌ ಬೆಲೆಯಲ್ಲಿ ಲಭ್ಯ

ವಿವೋ X200T ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ

ವಿವೋ ಕಂಪನಿಯ ಈ ಮೊಬೈಲ್‌ 6,200mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ

ವಿವೋ ಕಂಪನಿಯ ಇತ್ತೀಚಿನ Vivo X200T ಸ್ಮಾರ್ಟ್‌ಫೋನ್‌ ಬಜೆಟ್‌ ದರದಲ್ಲಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಇದೀಗ ವಿವೋ X200T ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಕಾಣಿಸಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ವಿವೋ ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9400+ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ 6,200mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ X200T ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Amazon ಸೇಲ್‌: ಬಜೆಟ್‌ ದರದ ಈ ಮೊಬೈಲ್‌ ಈಗ ಸಸ್ತಾ ಬೆಲೆಯಲ್ಲಿ ಲಭ್ಯ!

Vivo X200T ಬೆಲೆಯಲ್ಲಿ ಭಾರೀ ಇಳಿಕೆ

ವಿವೋ ಕಂಪನಿಯ ವಿವೋ X200T ಫೋನ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಬಿಗ್ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 12 GB RAM + 256 GB ವೇರಿಯಂಟ್‌ ಬೆಲೆ 79,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 59,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಹಾಗೆಯೇ ಈ ಸ್ಮಾರ್ಟ್‌ಫೋನ್‌ Seaside Lilac ಮತ್ತು Stellar Black ಕಲರ್‌ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ.

ವಿವೋ X200T ಫೀಚರ್ಸ್‌ ಮಾಹಿತಿ

ವಿವೋ X200T ಫೋನ್ 6.67 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು ಇದು 120Hz ರಿಫ್ರೆಶ್ ರೇಟ್‌ ಸೌಲಭ್ಯ ಹೊಂದಿದೆ. ಅಲ್ಲದೇ ಇದು 5,000 nits ಗರಿಷ್ಠ ಬ್ರೈಟ್ನೆಸ್‌ ಪಡೆದುಕೊಂಡಿದೆ. ಇನ್ನು ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9400+ ಚಿಪ್‌ಸೆಟ್‌ ಪ್ರೊಸೆಸರ್‌ ಬಲ ಪಡೆದಿರುವ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ OriginOS 6 ಅನ್ನು ರನ್ ಮಾಡುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನಿಂದ IP68 ಮತ್ತು IP69 ರಕ್ಷಣೆ ಸೌಲಭ್ಯ ಸಹ ಪಡೆದುಕೊಂಡಿದೆ.

ವಿವೋ X200T ಹಿಂಭಾಗದಲ್ಲಿ ಟ್ರಿಪಲ್‌ Zeiss ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ ಸೇರಿದಂತೆ ಇನ್ನುಳಿದ ಎರಡು ಕ್ಯಾಮೆರಾಗಳು ಸಹ 50MP ಸೆನ್ಸಾರ್‌ ಸೌಲಭ್ಯ ಪಡೆದುಕೊಂಡಿವೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು OIS ಹೊಂದಿರುವ ಸೋನಿಯ IMX921 ಸೆನ್ಸಾರ್‌ ಪಡೆದುಕೊಂಡಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 32MP ಸೆನ್ಸಾರ್‌ನ ಕ್ಯಾಮೆರಾ ವ್ಯವಸ್ಥೆ ನೀಡಲಾಗಿದೆ. ವಿವೋ ಕಂಪನಿಯ ಈ ಹೊಸ ಸ್ಮಾರ್ಟ್‌ಫೋನ್ 6,200mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಹೊಂದಿದ್ದು ಇದು 90W ವೈರ್ಡ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ Seaside Lilac ಮತ್ತು Stellar Black ಕಲರ್‌ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :